ಆದರ್ಶಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್
ಪ್ರಶ್ನೆ ಪತ್ರಿಕೆ
ಅ) ಪದಗಳ ಅರ್ಥ ಬರೆಯಿರಿ. (Write word meaning)
ಬೆರಗು, ಬೇಗೆ, ಮಂತ್ರಮುಗ್ಧ, ವ್ಯಾಪಕ, ಗೃಹಣ ಶಕ್ತಿ, ಅಮರ, ಬುನಾದಿ, ಭಾವೋದ್ರೇಕ, ಮೊಳಗು, ಅನುಪಮ,
ಆ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ. (Answer in one sentence)
೧. ರಾಧಾಕೃಷ್ಣನ್ ಅವರ ತಂದೆತಾಯಿಯರ ಹೆಸರೇನು?
೨. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಯಾವ ಹೆಸರಿನಿಂದ ಆಚರಿಸಲಾಗುತ್ತದೆ?
೩. ರಾಧಾಕೃಷ್ಣನ್ ಅವರ ತಂದೆಯ ಅಪೇಕ್ಷೆ ಏನಾಗಿತ್ತು?
೪. ರಾಷ್ಟ್ರಪತಿಗಳಾಗಿ ಪಡೆಯುತ್ತಿದ್ದ ವೇತನವನ್ನು ರಾಧಾಕೃಷ್ಣನ್ ಅವರು ಹೇಗೆ ಸದುಪಯೋಗಪಡಿಸಕೊಂಡರು?
ಇ) ಕೊಟ್ಟಿರುವ ಪ್ರಶ್ನೆಗಳಿಗೆ ಮೂರು – ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ. (Write answer in 3-4 sentences)
೧. ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಏನು ಹೇಳಿದರು?
೨. ರಾಧಾಕೃಷ್ಣನ್ ಅವರ ವೇಷಭೂಷಣಗಳ ಬಗ್ಗೆ ಬರೆಯಿರಿ.
೩. ರಾಧಾಕೃಷ್ಣನ್ ಅವರ ವಿದ್ಯಾಭ್ಯಾಸ ಎಲ್ಲೆಲ್ಲಿ ನಡೆಯಿತು?
೪. ಶಿಕ್ಷಣದ ಮಹತ್ವವನ್ನು ಕುರಿತು ರಾಧಾಕೃಷ್ಣನ್ ಅವರು ಏನು ಹೇಳಿದ್ದಾರೆ?
೫. ರಾಧಾಕೃಷ್ಣನ್ ಅವರಿಗೆ ಸಂದ ಪ್ರಶಸ್ತಿ ಪುರಸ್ಕಾರಗಳು ಯಾವುವು?
ಈ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು – ಹತ್ತು ವಾಕ್ಯಗಳಲ್ಲಿ ಉತ್ತರಿಸಿ. (Write answer in 8 – 10 sentences)
೧. ರಾಧಾಕೃಷ್ಣನ್ ಅವರು ಅಧ್ಯಾಪಕರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ವಿವರಿಸಿ. ೨. ಹಿಂದೂ ಧರ್ಮ ಮತ್ತು ತತ್ವಶಾಸ್ತ್ರದ ಬಗ್ಗೆ ರಾಧಾಕೃಷ್ಣನ್ ಅಭಿಪ್ರಾಯವೇನು? ವಿವರಿಸಿ.
೩. ರಾಧಾಕೃಷ್ಣನ್ ಅವರಿಗೆ ಮೈಸೂರಿನಲ್ಲಿ ನೀಡಿದ ಬೀಳ್ಕೊಡುಗೆಯ ವಿಶೇಷತೆಯನ್ನು ಕುರಿತು ವಿವರಿಸಿ.
ಉ. ಕೊಟ್ಟಿರುವ ವಾಕ್ಯಗಳ ಸಂದರ್ಭ ಸಹಿತ ಸ್ವಾರಸ್ಯವನ್ನು ವಿವರಿಸಿ. (Explain the context)
೧. “ಆರ್ಥಿಕ ಪರಿಸ್ಥಿತಿ ನಮ್ಮ ಸಾಧನೆಯಲ್ಲಿ ನಿವಾರಿಸಲಾಗದ ತೊಡಕೆಂದು ಭಾವಿಸಲಿಲ್ಲ.”
೨. “ನೀವೊಬ್ಬರೇ ನನ್ನನ್ನು ಒಬ್ಬ ಮನುಷ್ಯನಂತೆ ಕಂಡು ವರ್ತಿಸಿದವರು”.
೩. “ಅಶೋಕನು ಕಳಿಂಗ ಯುದ್ಧದ ನಂತರ ಶ್ರೇಷ್ಠ ಮನುಷ್ಯನಾದಂತೆ ನೀವು ಆಗುವಿರಿ”.
೪. “ಮಾನವತೆಯೇ ವಿಶ್ವ ಅನುಸರಿಸಬೇಕಾದ ಮಾರ್ಗ.”
೫. “ಏರು ಜವ್ವನದ ಯುವಕರಂತೆ ಹಾಸ್ಯ ವಿನೋದಗಳಲ್ಲಿ ತೊಡಗುತ್ತಿದ್ದರು.”
ಊ. ಬಿಟ್ಟ ಸ್ಥಳ ತುಂಬಿರಿ. (Fill in the blanks)
೧. ರಾಧಾಕೃಷ್ಣನ್ ಅವರ ಸಾಧನೆಯಲ್ಲಿ ವಿಶೇಷ ಸಹಕಾರ ನೀಡಿದವರು …………………
೨. “ಮಾನವತೆಯೇ ವಿಶ್ವ ಅನುಸರಿಸಬೇಕಾದ ಮಾರ್ಗ” ಎಂದು ರಾಧಾಕೃಷ್ಣನ್
೩. ಅವರು ರೇಡಿಯೋ ಪ್ರಸಾರ ಭಾಷಣ ಮಾಡಿದ ದೇಶ …………………………………
೪. ಭಾರತ ಮತ್ತು ರಷ್ಯಾದ ಬಾಂಧವ್ಯವನ್ನು ವೃದ್ಧಿಗೊಳಿಸಿದ ರಾಧಾಕೃಷ್ಣನ್ ಅವರನ್ನು ಪ್ರಶಂಶಿಸಿದವರು ……………………………………
೫. ಮದ್ರಾಸಿನ ಕ್ರಿಶ್ಚಿಯನ್ ಶಾಲೆಯಲ್ಲಿ ರಾಧಾಕೃಷ್ಣನ್ ಅವರು ಉತ್ತಮ ವಿದ್ಯಾರ್ಥಿ ಎಂದು ಪರಿಗಣಿಸಲ್ಪಟ್ಟ ವಿಷಯ ………………………………………
೬. ರಾಧಾಕೃಷ್ಣನ್ ಅವರು ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾನಿಲಯ ……………………………………
ಋ. ಹೊಂದಿಸಿ ಬರೆಯಿರಿ (Match the following)
ಅ ಬ
೧. ಸ್ಟಾಲಿನ್ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ
೨. ಹರ್ಮನ್ಸ್ ಬರ್ಗ್ ಮಿಷನರಿ ಶಾಲೆ
೩. ಭಾರತೀಯ ವಿದ್ಯಾಭವನ ಮಾಸ್ಕೊ
೪. ಆಕ್ಸ ಫರ್ಡ್ ವಿಶ್ವವಿದ್ಯಾನಿಲಯ
೫. ಸೆಪ್ಟೆಂಬರ್‌೦೫ ಬ್ರಹ್ಮ ವಿದ್ಯಾಭಾಸ್ಕರ
ಸ್ವಾತಂತ್ರ್ಯ ದಿನಾಚರಣೆ
Click here to download Adarshashikshaka Sarvepalli Radhakrishnan Worksheet