Bhagyasilpigalu, X grade lesson is about Shri Nalwadi Krishnaraja Wodeyar and Sir M Visvesvaraya. Everyone born has the opportunity to become an achiever, but not everyone becomes an achiever. Becoming an achiever is a huge social responsibility. Perseverance, future thinking and mobility are required. Obstacles encountered in the path of achievement must be overcome. The society always remembers such rare achievers. The hope here is to get acquainted with the services rendered for the development of the Karnataka State by achieving socially, educationally, administratively, scientifically. Bhagyasilpigalu of Model Mysuru are Our Shri Nalvadi Krishnaraja Odeyar and Sir M Visvesvaraya are our lucky architects.
ಹುಟ್ಟಿದವರೆಲ್ಲರಿಗೂ ಸಾಧಕರಾಗುವುದಕ್ಕೆ ಅವಕಾಶವಿದ್ದರೂ ಎಲ್ಲರೂ ಸಾಧಕರಾಗುವುದಿಲ್ಲ. ಸಾಧಕರಾಗುವುದಕ್ಕೆ ಅಪಾರವಾದ ಸಾಮಾಜಿಕ ಹೊಣೆಗಾರಿಕೆ ಪರಿಶ್ರಮ ಭವಿಷ್ಯ ಚಿಂತನೆ ಚಲವಂತಿಕೆ ಬೇಕಾಗುತ್ತದೆ ಸಾಧನೆಯ ಪಥದಲ್ಲಿ ಎದುರಾಗುವ ಅಡ್ಡಿ ಆತಂಕಗಳನ್ನು ನಿವಾರಿಸಿಕೊಳ್ಳಬೇಕು. ಇಂತಹ ಅಪರೂಪದ ಸಾಧಕರನ್ನು ಸಮಾಜ ನಿತ್ಯ ಸ್ಮರಿಸುತ್ತದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆಡಳಿತಾತ್ಮಕವಾಗಿ, ವೈಜ್ಞಾನಿಕವಾಗಿ ಸಾಧನೆ ಮಾಡಿ ಕನ್ನಡ ನಾಡಿನ ಅಭಿವೃದ್ಧಿಗಾಗಿ ಸಲ್ಲಿಸಿರುವ ಸೇವೆಯ ಪರಿಚಯ ಮಾಡಿಕೊಳ್ಳುವುದು ಇಲ್ಲಿನ ಆಶಯ. ನಮ್ಮ ನಾಲ್ವಡಿ ಕೃಷ್ಣರಾಜ ಒಡೆಯರು ಹಾಗೂ ಸರ್ ಎಂ ವಿಶ್ವೇಶ್ವರಯ್ಯನವರು ನಮ್ಮ ಭಾಗ್ಯಶಿಲ್ಪಿಗಳು.
ಮಾದರಿ ಮೈಸೂರಿನ ಭಾಗ್ಯಶಿಲ್ಪಿಗಳು
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ಸಂಸ್ಥಾನದ ೨೪ನೇಯ ರಾಜರು. ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಡೀ ಭರತ ಖಂಡದಲ್ಲಿ ಮೈಸೂರು ಸಂಸ್ಥಾನವನ್ನು ʼಮಾದರಿ ಮೈಸೂರುʼ ಎಂಬ ಕೀರ್ತಿಯನ್ನು ತಂದು ಕೊಟ್ಟರು. ಪ್ರಜಾಪ್ರತಿನಿಧಿ ಸಭೆಯನ್ನು ಶಾಸನಬದ್ಧ ಸಂಸ್ಥೆಯನ್ನಾಗಿ ಮಾರ್ಪಡಿಸಿ ಸಭೆಯನ್ನು ವರ್ಷಕ್ಕೆ ಎರಡು ಬಾರಿ ಜೂನ್ ೧ (ಮಹಾರಾಜರ ವರ್ಧಂತಿ) ಹಾಗೂ ಅಕ್ಟೋಬರ್ ೨ (ದಸರಾ ಮಹೋತ್ಸವ)ರಂದು ಸಮಾವೇಶ ಕಲಾಪಗಳನ್ನು ನಡೆಸುತ್ತಿದ್ದರು. ನಾಲ್ವಡಿ ಕೃಷ್ಣರಾಜರು ೫೦ ಜನ ಸದಸ್ಯರು ಕೂಡಿದ ನ್ಯಾಯ ವಿಧಾಯಕ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಮಾವೇಶ ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ನಡೆಯುತ್ತಿತ್ತು. ೧೯೦೦ರಲ್ಲಿ ಶಿವನಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪಿಸಿದರು. ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಳೀಯ ಸಂಸ್ಥೆಗಳನ್ನು ರಚಿಸಿ ಆಡಳಿತವನ್ನು ಕೇಂದ್ರೀಕರಿಸಿದ್ದರು. ನಗರ ಪಾಲಿಕೆಗಳು ಹಾಗೂ ಗ್ರಾಮ ಪಂಚಾಯಿತಿಗಳನ್ನು ಆರಂಭ ಮಾಡಿದರು. ಇವರ ಕಾಲದಲ್ಲಿ ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ ನೀರಿನ ಸೌಕರ್ಯ ಹಾಗೂ ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳನ್ನು ಆಡಳಿತ ಕ್ಷೇತ್ರಗಳನ್ನಾಗಿ ಮಾಡಿದರು. ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು. ಅವರು ಅನೇಕ ರೈಲು ಮಾರ್ಗಗಳನ್ನು ಸ್ಥಾಪಿಸಿದರು.
ಸರ್ ಎಂ ವಿಶ್ವೇಶ್ವರಯ್ಯನವರು ಕ್ರಿಸ್ತಶಕ ೧೮೬೦ ಸೆಪ್ಟೆಂಬರ್ ೧೫ರಂದು ಜನಿಸಿದರು. ವಿಶ್ವೇಶ್ವರಯ್ಯನವರು ಮೂರು ವರ್ಷಗಳ ಕಾಲ ಮೈಸೂರು ಸಂಸ್ಥಾನದಲ್ಲಿ ಕಾರ್ಯ ನಿರ್ವಹಿಸಿದರು. ವಿಶ್ವೇಶ್ವರಯ್ಯನವರು ಕಾವೇರಿ ನದಿಗೆ ಕನ್ನಂಬಾಡಿ ಜಲಾಶಯ ನಿರ್ಮಾಣ ಯೋಜನೆ, ರೈಲು ಮಾರ್ಗಗಳ ವಿಸ್ತರಣೆಗೆ ಕ್ರಮ, ತಾಂತ್ರಿಕ ಶಿಕ್ಷಣದ ಅಭಿವೃದ್ಧಿ ಯೋಜನೆ ಕೈಗೊಂಡರು.ವಿಶ್ವೇಶ್ವರಯ್ಯನವರು ಮಾರಿ ಕಣಿವೆ ಜಲಾಶಯದ ನೀರು ಹಂಚಿಕೆಯ ಪುನರ್ವ್ಯವಸ್ಥೆ, ಸಣ್ಣ ನೀರಾವರಿ ವ್ಯವಸ್ಥೆಗೆ ಮರುಜೀವ ಹೀಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಅವರು ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಾಲೆ, ಮೈಸೂರಿನ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಪ್ರಾರಂಭಿಸಿದರು. ವಿಶ್ವೇಶ್ವರಯ್ಯನವರು ಕೈಗಾರಿಕೆಗೆ ಅಗ್ರ ಪ್ರಾಶ್ಯಸ್ತ ನೀಡಿದರು. ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪಿಸುವುದು ಅವರ ದೊಡ್ಡ ಗುರಿಯಾಗಿತ್ತು. ಇದಲ್ಲದೆ ಮೂಳೆ ಮತ್ತು ಗೊಬ್ಬರ ತಯಾರಿಕಾ ಸ್ಥಾವರ, ಸಕ್ಕರೆ ಕಾರ್ಖಾನೆ, ಔಷಧಿ ತಯಾರಿಕಾ ಘಟಕ, ಗಂಧದ ಎಣ್ಣೆ, ಬೆಂಕಿಕಡ್ಡಿ ಹಾಗೂ ಕಾಗದ ಕಾರ್ಖಾನೆಗಳು ಸ್ಥಾಪಿಸಿದರು. ಸೋಪು ಹಾಗೂ ಲೋಹ ತಯಾರಿಕೆ ಕಲೆ ಮತ್ತು ಕರಕುಶಲ ಡಿಪೋ, ಕೃಷ್ಣರಾಜೇಂದ್ರ ಬಟ್ಟೆ ಗಿರಣಿ. ಕಾಗದ, ತಿರುಳು, ರಟ್ಟು, ಪೆನ್ಸಿಲ್, ಬೆಂಕಿಕಡ್ಡಿ ಮತ್ತು ಪೀಠೋಪಕರಣಗಳ ತಯಾರಿಕಾ ಘಟಕಗಳು ಹೀಗೆ ನೂರಾರು ಕೈಗಾರಿಕೆಗಳನ್ನು ಪ್ರಾರಂಭಗೊಳಿಸಿದರು. ಇವರು ೧೯೧೩ರಲ್ಲಿ ಮೈಸೂರು ಬ್ಯಾಂಕ್ ನ್ನು ಸ್ಥಾಪಿಸಿದರು. ಕೈಗಾರಿಕೆಗಳ ಅಭಿವೃದ್ಧಿಗೆ ಫೀಡರ್ ಬ್ಯಾಂಕ್ ಹಾಗೂ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಧಿಗಳು ಶುರು ಮಾಡಿದರು. ಸಾರ್ವಜನಿಕ ಜೀವ ವಿಮಾ ಯೋಜನೆ ಜಾರಿಗೆ ತಂದರು.