ಕನ್ನಡ ನಾಡು ನುಡಿ
ಅ) ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.
೧. ಪದನರಿದು ನುಡಿಯುವವರು ಯಾರು ಎಂದು ಕವಿ ಹೇಳಿದ್ದಾನೆ?
೨. ತುಪ್ಪದೊಡನೆ ಯಾವುದನ್ನು ಬೆರೆಸಬಾರದು?
೩. ಮಹಲಿಂಗರಂಗನ ಪ್ರಕಾರ ಸುಲಿದ ಬಾಳೆಯ ಹಣ್ಣಿನಂತೆ ಇರುವ ಭಾಷೆ ಯಾವುದು?
ಆ) ಈ ಕೆಳಗಿನ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯದಲ್ಲಿ ಉತ್ತರಿಸಿ.
೧. ಕನ್ನಡಿಗರ ವಿಶೇಷತೆಯನ್ನು ಶ್ರೀ ವಿಜಯ ಹೇಗೆ ಸಾರಿದ್ದಾನೆ?
೨. ಕನ್ನಡ ಮತ್ತು ಸಂಸ್ಕೃತ ಭಾಷಾ ಬಳಕೆಯ ಬಗ್ಗೆ ನಯಸೇನ ಏನು ಹೇಳುತ್ತಾನೆ ?
೩. ಕವೀಂದ್ರರ ಶ್ರೇಷ್ಠತೆಯನ್ನು ನೇಮಿಚಂದ್ರನು ಹೇಗೆ ವರ್ಣಿಸಿದ್ದಾನೆ ?
೪. ಕನ್ನಡ ನುಡಿಯಲ್ಲೇ ಮೋಕ್ಷ ಸಾಧನೆ ಎಂದು ಕವಿ ಮಹಲಿಂಗರಂಗ ಹೇಗೆ ಸಾಧಿಸುತ್ತಾರೆ ?
೫. ಕನ್ನಡ ನಾಡಿನ ಪಾಕೃತಿಕ ವರ್ಣನೆಯನ್ನು ಆಂಡಯ್ಯ ಕವಿ ಹೇಗೆ ಸಾರಿದ್ದಾರೆ ?
ಇ ) ಕೆಳಗಿನ ಪ್ರಶ್ನೆಗೆ ಎಂಟು ಹತ್ತು ವಾಕ್ಯದಲ್ಲಿ ಉತ್ತರಿಸಿ.
೧. ಕನ್ನಡ ನಾಡಿನ ವಿಸ್ತಾರ, ಪ್ರಾಕೃತಿಕ ಸಂಪತ್ತಿನ ಬಗ್ಗೆ ಕವಿಗಳು ಹೇಗೆ ವರ್ಣಿಸಿದ್ದಾರೆ?
೨. ಕನ್ನಡ ಭಾಷೆ ಹಾಗೂ ಸಾಹಿತ್ಯದ ಬಗ್ಗೆ ಕವಿಗಳಿಗಿರುವ ಅಭಿಮಾನ ಹೇಗೆ ವ್ಯಕ್ತವಾಗಿದೆ?
ಈ ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ.
೧. ಕುರಿತೋದದೆಯುಂ ಕಾವ್ಯಪ್ರಯೋಗ ಪರಿಣತಮತಿಗಳ್
೨. ತಕ್ಕುದೆ ಬೆರೆಸಲ್ಕೆ ಘೃತಮುಮಂ ತೈಲಮುಮಂ.
೩. ಕಟ್ಟುಗೆ ಕಟ್ಟುದಿರ್ಕೆ ಕಡಲಂ ಕಪಿಸಂತತಿ.
೪. ಕಳಿದ ಸಿಗುರಿನ ಕಬ್ಬಿನಂದದಿ
೫. ದಾಳಿಂಬಯಲ್ಲದೊಪ್ಪುವ ಚೆಂದೆಂಗಳಲ್ಲದೆ.